ಶನಿವಾರಸಂತೆ, ಜೂ. 6: ಕೊಡಗಿನ ಗಡಿ ಪ್ರದೇಶದ ಕೊಡ್ಲಿಪೇಟೆ ಹೋಬಳಿಯ ಅಲ್ಲಲ್ಲಿ ನಡೆಯುತ್ತಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ, ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ. ಅವರು ಹಠಾತ್ ದಾಳಿ ನಡೆಸಿದ್ದರು.
ಈ ಸಂದರ್ಭ ಅಲ್ಲಲ್ಲಿ ಅಕ್ರಮ ಮರಳು ದಾಸ್ತಾನು ಪತ್ತೆ ಹಚ್ಚಿರುವ ಪೊಲೀಸ್ ವರಿಷ್ಠಾಧಿಕಾರಿಗಳು; ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವಂತೆ ಕೆಳ ಹಂತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ ಮೇರೆಗೆ 7 ಕಡೆಗಳಲ್ಲಿ ಅಕ್ರಮ ಮರಳು ದಂಧೆ ನಡೆಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.
32 ಲಾರಿ ಮರಳು
ಅಲ್ಲದೆ ಎಸ್‍ಪಿ ನಿರ್ದೇಶನದಂತೆ ಶನಿವಾರಸಂತೆ ಠಾಣಾಧಿಕಾರಿ ತಿಮ್ಮಶೆಟ್ಟಿ ಹಾಗೂ ಸಿಬ್ಬಂದಿ 5 ಮಂದಿ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ; ಒಟ್ಟು 32 ಲಾರಿಗಳಷ್ಟು ಅಕ್ರಮ ಮರಳು ದಾಸ್ತಾನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.