ಭಾಗಮಂಡಲದ, ಜೂ. 6: ರಾಜ್ಯ ಸರ್ಕಾರದ ವತಿಯಿಂದ ಮಳೆಗಾಗಿ ಪ್ರಾರ್ಥಿಸಲು ಪುಣ್ಯಕ್ಷೇತ್ರ ಹಾಗೂ ದೇಗುಲಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಯಿತು. ಭಾಗಮಂಡಲದ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಗುರುವಾರ ಬೆಳಗ್ಗಿನ ಜಾವ 5.30ರಿಂದ ಹೋಮ ಹವನ, ಪೂಜಾವಿಧಿಗಳು ಆರಂಭಗೊಂಡವು. ದೇವಾಲಯದಲ್ಲಿ ಪರ್ಜನ್ಯಜಪ, ಕಲಶಾಭಿಷೇಕ, ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.ಮಳೆಗಾಗಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು.ಭಾಗಮಂಡಲ -ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯೆ ಮೀನಾಕ್ಷಿ, ಕಾರ್ಯನಿರ್ವಹಣಾಧಿಕಾರಿ ಜಗದೀಶ್‍ಕುಮಾರ್, ಪಾರುಪತ್ತೆಗಾರ ಪೊನ್ನಣ್ಣ ಹಾಗೂ ಭಕ್ತರು ಪಾಲ್ಗೊಂಡಿದ್ದರು.