ಮಡಿಕೇರಿ, ಜೂ. 6: ಕೊಡಗು ಜಿಲ್ಲೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್, ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶ ಪರೀಕ್ಷೆ ಮೂಲಕ ದಾಖಲು ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ತಾ. 10 ಕೊನೆ ದಿನವಾಗಿದೆ. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿಗಳನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ, ಬಸವನಹಳ್ಳಿ, ಆಲೂರು ಸಿದ್ದಾಪುರ, ಏಕಲವ್ಯ ಮಾದರಿ ವಸತಿ ಶಾಲೆ, ಬಾಳುಗೋಡು. ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ನಾಪೋಕ್ಲು (ತಿತಿಮತಿ) ಹಾಗೂ ಸೋಮವಾರಪೇಟೆ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಭಾಗಮಂಡಲ ಇಲ್ಲಿ ಪಡೆಯಬಹುದಾಗಿದೆ.