ಕುಶಾಲನಗರ, ಜೂ. 7: ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕ ಸಂಘ ಆಶ್ರಯದಲ್ಲಿ ತಾ. 8 ರಂದು ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಗೆ, ಉಪನ್ಯಾಸಕರುಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಡಿಕೇರಿಯ ಸಂತ ಜೋಸೆಫರ ಪದವಿಪೂರ್ವ ಕಾಲೇಜಿನಲ್ಲಿ ಸಂಘದ ಅಧ್ಯಕ್ಷ ಫಿಲಿಪ್‍ವಾಸ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚುರಂಜನ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿಭಾಗವಾರು ಶೇ.100 ಫಲಿತಾಂಶ ಪಡೆದ ಪಪೂ ಕಾಲೇಜುಗಳ ಉಪನ್ಯಾಸಕರಿಗೆ ಪುರಸ್ಕಾರ ಹಾಗೂ ನಿವೃತ್ತ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹಂಡ್ರಗಿ ನಾಗರಾಜ್ ತಿಳಿಸಿದ್ದಾರೆ.