ಮಡಿಕೇರಿ, ಜೂ. 9: ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಧಾನ ವೇದಿಕೆಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್ ಮತ್ತು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಇವರುಗಳ ಭಾವಚಿತ್ರ ಅಳವಡಿಸದಿರುವದು ಖಂಡನೀಯ ಎಂದು ಕಾಂಗ್ರೆಸ್ ವಕ್ತಾರ ಟಿ.ಈ. ಸುರೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯೆಯ ಭಾವಚಿತ್ರ ಅಳವಡಿಸದೆ ಅಗೌರವ ತೋರಿರುವದು ಕಸಾಪಗೆ ಶೋಭೆಯಲ್ಲ ಎಂದು ಅವರು ಅಭಿಪ್ರಾಯಿಸಿದ್ದಾರೆ.