ಮಡಿಕೇರಿ, ಜೂ. 8: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಕೊಡಗು ಮಡಿಕೇರಿ, ಅರಣ್ಯ ಇಲಾಖೆ, ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ತಾ. 11 ರಂದು ಬೆಳಗ್ಗೆ 9 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ಮತ್ತು ಪರಿಸರ ಜಾಥಾವು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಿಂದ ಕಾವೇರಿ ಕಲಾಕ್ಷೇತ್ರದವರೆಗೆ ನಡೆಯಲಿದೆ.

ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಅಧ್ಯಕ್ಷರಾದ ವೀರಪ್ಪ ವಿ. ಮಲ್ಲಾಪುರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಇತರರು ಪಾಲ್ಗೊಳ್ಳಲಿದ್ದಾರೆ.

ನಂತರ ಬೆಳಗ್ಗೆ 10 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ, ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.