ಶ್ರೀಮಂಗಲ, ಜೂ. 7: ದಕ್ಷಿಣ ಕೊಡಗಿನ ಶ್ರೀಮಂಗಲ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅರಣ್ಯ ಇಲಾಖೆ ಹಮ್ಮಿಕೊಂಡಿರುವ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆಯಲ್ಲಿ 4 ಕಾಡಾನೆಗಳು ಪತ್ತೆಯಾಗಿದ್ದು, ಅರಣ್ಯಕ್ಕೆ ಸೇರಿಸಲು ಸಾಧ್ಯವಾಗಿದೆ.
ಈ ವ್ಯಾಪ್ತಿಯ ಬೀರುಗ, ಕುರ್ಚಿ, ನೆಮ್ಮಲೆ, ಬಾಡಗರಕೇರಿ ಗ್ರಾಮದಲ್ಲಿ ಸುಮಾರು 20 ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಯಾಚರಣೆ ನೇತೃತ್ವವನ್ನು ಶ್ರೀಮಂಗಲ ವನ್ಯಜೀವಿ ವಲಯ ಅರಣ್ಯಾಧಿಕಾರಿ ವೀರೇಂದ್ರ ಮರಿಬಸಣ್ಣವರ್ ವಹಿಸಿದ್ದಾರೆ. ತಾ.8 ರಂದು (ಇಂದು) ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.