*ಗೋಣಿಕೊಪ್ಪಲು, ಜೂ. 8: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲವಿಗಾಗಿ ತಾ.10ರಂದು (ನಾಳೆ) ಪಟ್ಟಣದಲ್ಲಿ ವಿಜಯೋತ್ಸವ ನಡೆಸಲಾಗುವದು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಕುಂಞ್ಞಂಗಡ ಅರುಣ್ ಭೀಮಯ್ಯ ತಿಳಿಸಿದ್ದಾರೆ.

ಬೆಳಿಗ್ಗೆ 10.30ಕ್ಕೆ ಪಟ್ಟಣದ ಉಮಾಮಹೇಶ್ವರಿ ದೇವಸ್ಥಾನದಿಂದ ಆರ್‍ಎಂಸಿ ಆವರಣದವರೆಗೆ ಮೆರವಣಿಗೆ ನಡೆಸಲಾಗುವದು. ಬಳಿಕ ಆರ್‍ಎಂಸಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಭಾರತೀಶ್ ಹಾಗೂ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.