ವೀರಾಜಪೇಟೆ, ಜೂ. 8: ಯಾವದೇ ಅಡ್ಡ ಪರಿಣಾಮಗಳಿಲ್ಲದ ದೇಶೀಯ ಉತ್ಪನ್ನಗಳು ರಾಜ್ಯ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಡಾ. ಎ. ಯೊಗೇಶ್ ಹೇಳಿದರು.
ಇಲ್ಲಿನ ಫೀ.ಮಾ. ಕಾರ್ಯಪ್ಪ ರಸ್ತೆಯಲ್ಲಿರುವ ಶಿಕ್ಷಕರ ಸಹಕಾರ ಸಂಘದ ಸಭಾಂಗಣದಲ್ಲಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ವತಿಯಿಂದ ಹಮ್ಮಿಕೊಂಡಿದ್ದ ದೇಶೀಯ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಮೇಳ ಉದ್ಘಾಟಿಸಿ ಮಾತನಾಡಿದರು.
ಯೋಜನಾಧಿಕಾರಿ ಸದಾಶಿವ ಗೌಡ ಮಾತನಾಡಿ, ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ ಎಂದರು.
ಶಿಕ್ಷಕರ ಸಂಘದ ಅಧ್ಯಕ್ಷ ಎ.ಡಿ ಸೋಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷ ರಾಘವೇಂದ್ರ, ಸಿರಿ ಉದ್ಯಮದ ವ್ಯವಸ್ಥಾಪಕ ಸಂದೇಶ್, ವಲಯ ಮೇಲ್ವಿಚಾರಕಿ ಹೇಮಾವತಿ ಉಪಸ್ಥಿತರಿದ್ದರು.
ವಿಭಾಗ ಸೇವಾ ಪ್ರತಿನಿಧಿ ದೇವಕ್ಕಿ ಸ್ವಾಗತಿಸಿದರು. ರತ್ನಾ ಮೈತಾಳ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.