ಮಡಿಕೇರಿ, ಜೂ. 10: ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಮಕ್ಕಂದೂರು, ಮುಕ್ಕೋಡ್ಲು ಗ್ರಾಮಗಳ ಗ್ರಾಮಸಭೆಯು ತಾ. 13ರಂದು ಪೂರ್ವಾಹ್ನ 11 ಗಂಟೆಗೆ ಮಕ್ಕಂದೂರು ಗ್ರಾಮದ ವಿ.ಎಸ್.ಎಸ್.ಎನ್. ಬ್ಯಾಂಕ್ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಕಪ್ಪನ ಕಾವೇರಮ್ಮ ಹರೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡಲ್ ಅಧಿಕಾರಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಅಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.