*ವೀರಾಜಪೇಟೆ, ಜೂ. 10: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಸಹಬಾಳ್ವೆಯಿಂದ ಯಶಸ್ಸನ್ನು ಸಾಧಿಸಿದರೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ವೀರಾಜಪೇಟೆ ಕಾವೇರಿ ಕಾಲೇಜು ಪ್ರಾಂಶುಪಾಲೆ ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಹೇಳಿದರು.

ಕಾವೇರಿ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದÀಲ್ಲಿ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಯಾವ ವಿಷಯವನ್ನು ಆರಿಸಿಕೊಳ್ಳುವದು ಎಂಬ ಗೊಂದಲದಲ್ಲಿ ಇದ್ದಾರೆ. ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡರೆ ಮುಂದಿನ ಹಂತದಲ್ಲಿ ಯಾವ ಕ್ಷೇತ್ರ ಬೇಕಾದರೂ ಆರಿಸಿ ಕೊಳ್ಳಬಹುದಾಗಿದೆ ಎಂದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ ನಾಣಯ್ಯ ಮಾತನಾಡಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಕೇವಲ ಉತ್ತಮ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು.

ವೇದಿಕೆಯಲ್ಲಿ ಪತ್ರಕರ್ತ ಪಾರ್ಥ ಚಿಣ್ಣಪ್ಪ. ಶ್ವೇತಾ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಈ ಬಾರಿ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚ್ಚು ಅಂಕ ಪಡೆದು ಜಿಲ್ಲೆಗೆ 4 ಸ್ಥಾನ ಪಡೆದುಕೊಂಡ ಶ್ವೇತಾ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕಿ ದಮಯಂತಿ ಸ್ವಾಗತಿಸಿಸದರು. ಜಶನ್ ಬೋಪಣ್ಣ ಹಾಗೂ ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಟಿ.ಎನ್. ಕರುಣಾಕರ್ ವಂದಿಸಿದರು.