ಮಡಿಕೇರಿ, ಜೂ. 10: 2018ರ ಆಗಸ್ಟ್ ತಿಂಗಳಿನಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾದ ಗ್ರಾಮಗಳ 7 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಸೇವಾ ಭಾರತಿ ಕೊಡಗು ಮತ್ತು ಮೈಸೂರು ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಮಕ್ಕಂದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಢ ಶಾಲೆ, ಕಾಂಡನಕೊಲ್ಲಿ ಸ.ಹಿ.ಪ್ರಾ. ಶಾಲೆ, ಮಾದಾಪುರ ಸ.ಹಿ.ಪ್ರಾ. ಶಾಲೆ ಮತ್ತು ಪ್ರೌಢ ಶಾಲೆ, ಗಾಳಿಬೀಡು ಸ.ಹಿ.ಪ್ರಾ. ಶಾಲೆ ಹಾಗೂ ಸರ್ಕಾರಿ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಸೇವಾ ಭಾರತಿ ಕೊಡಗು ಸಂಸ್ಥೆಯ ಅಧ್ಯಕ್ಷ ಟಿ.ಸಿ. ಚಂದ್ರನ್, ಖಜಾಂಚಿ ಡಿ.ಹೆಚ್. ತಮ್ಮಪ್ಪ, ಚಂದ್ರ ಉಡೋತ್ ಮತ್ತು ಸೇವಾ ಭಾರತಿ ಮೈಸೂರು ಸಂಸ್ಥೆಯ ಪ್ರಮುಖರಾದ ಡಾ. ಅಚ್ಚುತ್ರಾವ್ ಹಾಗೂ ಮುರಳಿ ಇದ್ದರು. ನೋಟ್ ಪುಸ್ತಕ ವಿತರಣೆ ಸಂದರ್ಭ ಶಾಲಾ ಮುಖ್ಯ ಶಿಕ್ಷಕರು ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು.