ಮಡಿಕೇರಿ ಜೂ. 10: ಶ್ರೀ ರಾಮಕೃಷ್ಣ ಶಾರದಾಶ್ರಮದ ವತಿಯಿಂದ ಸ್ವಾಮಿ ವಿವೇಕಾನಂದರ ಐತಿಹಾಸಿಕ ಚಿಕಾಗೋ ಉಪನ್ಯಾಸದ 125ನೇ ವರ್ಷಾಚರಣೆ ಅಂಗವಾಗಿ ತಾ. 11ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿರುವ ಕೂರ್ಗ್ ಇನ್‍ಸ್ಟಿಟ್ಯೂಟ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ‘ಸಂಕಟಗಳ ಮಧ್ಯೆ ಯಶಸ್ಸಿನ ಸೂತ್ರಗಳು’ ಎಂಬ ವಿಚಾರದಡಿ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ಉದ್ಘಾಟನೆಯನ್ನು ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೆರವೇರಿಸಲಿದ್ದು, ಮುಖ್ಯ ಭಾಷಣಕಾರರಾಗಿ ರಾಮಕೃಷ್ಣ ಮಠ ಹಾಗೂ ಮಿಷನ್‍ನ ಟ್ರಸ್ಟಿಗಳಾದ ಸ್ವಾಮಿ ಮುಕ್ತಿದಾನಂದಜಿ ಭಾಗವಹಿಸುವರು, ಅತಿಥಿಗಳಾಗಿ ಪ್ರೊ. ಡಾ. ನಿಖಿಲ್ ಮೊರೊ ಪಾಲ್ಗೊಳ್ಳುವರು. ಪೊನ್ನಂಪೇಟೆ ರಾಮಕೃಷ್ಣ ಆಶ್ರಮದ 93ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಸಂಜೆ 6.30 ಗಂಟೆಗೆ ಆರತಿಯ ನಂತರ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ