ಮಡಿಕೇರಿ, ಜೂ.10 : ಸುಂಟಿಕೊಪ್ಪದ ಮುಹಮ್ಮದಲಿ ಶಿಹಾಬ್ ತಂಙಳ್ ಜೂನಿಯರ್ ಕಾಲೇಜಿನ 2019-20ನೇ ಸಾಲಿನ ನಾಲ್ಕನೇ ವರ್ಷದ ಅಧ್ಯಯನ ತರಗತಿ ತಾ. 12ರಿಂದ ಪುನರಾರಂಭ ಗೊಳ್ಳಲಿದೆ ಎಂದು ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಸಿ.ಎಂ.ಹಮೀದ್ ಮೌಲವಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ.12 ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಸಂಸ್ಥಾಪಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದಲ್ಲಿ ಪ್ರಖ್ಯಾತರಾಗಿರುವ ಸೈಯ್ಯಿದ್ ಝೈನುಲ್ ಅಬಿದೀನ್ ತಂಙಳ್ ದುಗ್ಗಲಡ್ಕ ಚಾಲನೆ ನೀಡಲಿದ್ದಾರೆ ಎಂದರು.
ಸಮಸ್ತ ಕೇರಳ ಜಂಯಿಯ್ಯತುಲ್ ಉಲಮಾ ಸದಸ್ಯರಾದ ಎಂ.ಅಬ್ದುಲ್ಲ ಫೈಝಿ, ಉಲಮಾ ಶಿರೋಮಣಿ ಗಳು ಹಾಗೂ ಸಾಮಾಜಿಕ, ರಾಜಕೀಯ ನೇತಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕೊಡಗಿನ ಬಡ ಮತ್ತು ನಿರ್ಗತಿಕ ವರ್ಗಕ್ಕೆ ಸೇರಿದ ಮಕ್ಕಳಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣವನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ 2016ರಲ್ಲಿ ಸಂಸ್ಥೆಯನ್ನು ಪ್ರಾರಂಭಿ¸ Àಲಾಗಿದ್ದು, ಈ ಬಾರಿ 90 ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.
ಪ್ರತಿ ವರ್ಷ ಪ್ರವೇಶ ಪರೀಕ್ಷೆಯ ಮೂಲಕ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದ್ದು, ಉಚಿತ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ವಸತಿ ವ್ಯವಸ್ಥೆಯನ್ನು ನೀಡಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ವೈ.ಎಂ.ಉಮ್ಮರ್ ಫೈಝಿ, ಕೋಶಾಧಿಕಾರಿ ಹಾರೂನ್ ಹಾಜಿ, ಸದಸ್ಯರಾದ ಎಂ.ತಮ್ಲೀಖ್ ದಾರಿಮಿ, ಪಿ.ಎಂ.ಆರಿಫ್ ಫೈಝಿ ಹಾಗೂ ಹಸನ್ ಕುಂಙÂ ಹಾಜಿ ಉಪಸ್ಥಿತರಿದ್ದರು.