ಸಿದ್ದಾಪುರ, ಜೂ. 12: ಸಿದ್ದಾಪುರದ ಮೈಸೂರು ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶಾಸಕ ಕೆ.ಜಿ ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ತಾ.ಪಂ ಸದಸ್ಯ ಜನೀಶ್, ಗ್ರಾ.ಪಂ ಅಧ್ಯಕ್ಷ ಮಣಿ, ಬಿ.ಜೆ.ಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಕುಕ್ಕುನೂರು ನಾಣಯ್ಯ, ಪದಾಧಿಕಾರಿಗಳಾದ ವಿ.ಕೆ ಲೊಕೇಶ್, ಅನಿಲ್ ಶೆಟ್ಟಿ, ದೇವಣಿರ ಸುಜಯ್, ಕೆ.ಎ ಹರಿದಾಸ್, ಎಂ.ಎ ಆನಂದ, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.