ಮಡಿಕೇರಿ, ಜೂ. 12: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತಾ. 14 ರಂದು ‘ಓಪನ್ ಹೌಸ್’ ಕಾರ್ಯಕ್ರಮ ಜರಗಲಿದೆ. ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಹಾಕಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸವಲತ್ತುಗಳನ್ನು ಮುಖತಃ ಪರಿಚಯಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ.

ಕಾರ್ಯಕ್ರಮ ತಾ. 14 ರಂದು ಬೆಳಿಗ್ಗೆ 10.30ಕ್ಕೆ ಪ್ರೊ. ಎಂ.ಎಸ್. ಮೂಡಿತ್ತಾಯ, ಸಹ ಕುಲಾಧಿಪತಿಗಳು, ನಿಟ್ಟೆ ವಿಶ್ವವಿದ್ಯಾನಿಲಯ ಇವರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಲೆಕ್ಚರ್ ಕಾಂಪ್ಲೆಕ್ಸ್ ಹಾಲ್‍ನಲ್ಲಿ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಯ ನಂತರ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ವಿಭಾಗಗಳಿಗೆ ಭೇಟಿ ನೀಡಿ ಬೋಧಕ ವರ್ಗದವರೊಡನೆ ವಿಷಯಗಳ ಆಯ್ಕೆ ಸಂಬಂಧಿತ ಚರ್ಚೆ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಅದೇ ದಿನ ವಿವಿಧ ವಿಭಾಗಗಳಲ್ಲಿ ಅರ್ಜಿಗಳನ್ನು ನೀಡಲಾಗುವದು ಮತ್ತು ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.