ಮಡಿಕೇರಿ, ಜೂ. 12: ಪ್ರಸಕ್ತ(2019-20) ಸಾಲಿನಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಾದ ಚೈತನ್ಯ ಸಹಾಯಧನ ಯೋಜನೆ, ಡಿ ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸಬುದಾರರಿಗೆ ಸಾಲ ಮತ್ತು ಸಹಾಯಧನ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿ ರಹಿತ ಸಾಲಯೋಜನೆ, ಗಂಗಾ-ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸೌಲಭ್ಯ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ಆಯಾಯ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಲು ಜುಲೈ 3 ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಲು ಜುಲೈ 12 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ಹಾಗೂ ದೂರವಾಣಿ ಸಂಖ್ಯೆ 08272-221656 ನ್ನು ಸಂಪರ್ಕಿಸಬೇಕಾಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.