ಮಡಿಕೇರಿ, ಜೂ. 11: ಮಡಿಕೇರಿ ನಗರಸಭಾ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ ಮಂಜುನಾಥ್ ಕುಮಾರ್, 23 ವಾರ್ಡ್‍ಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲವಿಗೆ ಕಾರ್ಯತಂತ್ರ ರೂಪಿಸಲು ಸಿದ್ಧರಾಗಬೇಕೆಂದು ಕರೆ ನೀಡಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಮಾಜಿ ನಗರಸಭಾ ಅಧ್ಯಕ್ಷ ಹೆಚ್.ಎಂ. ನಂದಕುಮಾರ್, ಚುಮ್ಮಿ ದೇವಯ್ಯ, ಪ್ರಭು ರೈ, ಜಫ್ರುಲ್ಲಾ, ಟಿಎಂ ಅಯ್ಯಪ್ಪ ಸೇರಿದಂತೆ ಮುಖಂಡರು ಸೂಕ್ತ ಸಲಹೆ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಜಿಲ್ಲಾ ಪಂಚಾಯಿತಿ ಸದಸ್ಯೆ ಕುಮುದ ಧರ್ಮಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ಡಿಸಿಸಿ ಉಪಾಧ್ಯಕ್ಷ ಸುನಿಲ್ ಪತ್ರಾವೋ, ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ. ಸುರೇಶ್, ಜಾಲತಾಣದ ಸೂರಜ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸದಾ ಮುದ್ದಪ್ಪ, ಹೆಚ್. ಎಸ್ ಯತೀಶ್ ಕುಮಾರ್, ಪ್ರಮುಖರಾದ ಮುನೀರ್, ಸ್ವರ್ಣಲತಾ ಸೇರಿದಂತೆ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಇದ್ದರು.