*ಗೋಣಿಕೊಪ್ಪಲು, ಜೂ. 12: ಸ್ವಚ್ಛಮೇವ ಜಯತೆ ಮತ್ತು ಜಲಾಮೃತ ಜನಾಂದೋಲನ ಕಾರ್ಯಕ್ರಮಕ್ಕೆ ತಾ.ಪಂ. ಅಧಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಚಾಲನೆ ನೀಡಿದರು. ಪೆÇನ್ನಂಪೇಟೆ ತಾ.ಪಂ. ಸಾಮಾಥ್ರ್ಯ ಸೌಧ ಸಭಾಂಗಣದಲ್ಲಿ ಸರ್ವ ಸದಸ್ಯರುಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಒಂದು ತಿಂಗಲ ಕಾಲ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ, ಶಾಲಾ ಕಾಲೇಜುಗಳಲ್ಲಿ ಸ್ವಚ್ಚತೆಯ ಬಗ್ಗೆ ಹಾಗೂ ನೀರಿನ ಬಗ್ಗೆ ಜಾಗೃತಿ ಮೂಡಿಸಲಾಗುವದು. ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಜನೀತ್, ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹಾಜರಿದ್ದರು.