ಮಡಿಕೇರಿ ಜೂ.11 : ನಿಫಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವಾದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿವಕುಮಾರ್ ಮಾಹಿತಿಯಿತ್ತರು. ನಗರದ ತಾ.ಪಂ ಸಭಾಂಗಣದಲ್ಲಿ ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ನಿಫಾ ವೈರಸ್‍ಗೆ ಸಂಬಂಧಿಸಿದಂತೆ ಭಾಗಮಂಡಲ ಮತ್ತು ಸಂಪಾಜೆ ವ್ಯಾಪ್ತಿಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಪ್ರತೀ ಆರೋಗ್ಯ ಕೇಂದ್ರದಲ್ಲೂ ನಿಫಾ ವೈರಸ್ ಕುರಿತು ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೂಲಕ ಮನೆ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ ಎಲ್ಲಾ ಪ್ರಾಥಮಿಕ ಆರೋಗ್ಯ ಸಮುದಾಯದಲ್ಲಿ ಜೂ. 21 ರಂದು ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀರಿನ ವ್ಯವಸ್ಥೆ, ಪ್ರತ್ಯೇಕ ಹೆರಿಗೆ ಕೊಠಡಿ ಮತ್ತು ಶಸ್ತ್ರ ಚಿಕಿತ್ಸಾ ಕೊಠಡಿ ಸ್ಥಾಪನೆಗೆ

ತಾ.ಪಂ ಮೂಲಕ ಅನುದಾನ ಒದಗಿಸುವಂತೆಯೂ ಶಿವಕುಮಾರ್ ಕೋರಿದರು.

(ಮೊದಲ ಪುಟದಿಂದ)

ಮಳೆಗಾಲದಲ್ಲೂ ನೀರಿಲ್ಲ

ಸಚಿವರು ಸ್ಪ್ಲಂದಿಸುತ್ತಿಲ್ಲ

ಮಳೆಗಾಲದಲ್ಲು ಕುಡಿಯುವ ನೀರಿಗೆ ಬರ ಬಂದಿದೆ ಎನ್ನುವ ಕುರಿತು ತಾಲೂಕು ಪಂಚಾಯ್ತಿಯ ಬಹುತೇಕ ಸದಸ್ಯರು ಇಂದಿನ ಸಭೆಯಲ್ಲಿ ಟೀಕಿಸಿದರು.

ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿದ್ದು, ಶಾಶ್ವತ ಪರಿಹಾರ ಸೂಚಿಸುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂದು ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾವೇರಿ ನಾಡಿನಲ್ಲೇ ಕುಡಿಯುವ ನೀರಿಗೆ ಬರ ಬಂದಿರುವ ಬಗ್ಗೆ ಸರ್ಕಾರದ ಗಮನ ಸೆಳೆದು ಸೂಕ್ತ ಕ್ರಮಕ್ಕಾಗಿ ಒತ್ತಡ ಹೇರುವ ಕುರಿತು ಸಭೆ ನಿರ್ಣಯ ಕೈಗೊಂಡಿತು. ಅಲ್ಲದೆ, ಸದಸ್ಯ ನಾಗೇಶ್‍ಕುಂದಲ್ಪಾಡಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಗ್ರಾಮೀಣ ಭಾಗವನ್ನು ಅತಿಯಾಗಿ ಕಾಡುತ್ತಿದ್ದರೂ ಯಾವದೇ ಪರಿಹಾರ ಸೂಚಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಸಮಸ್ಯೆಗಳ ಬಗ್ಗೆ ಗಮನಿಸುತ್ತಿಲ್ಲವೆಂದು ಆರೋಪಿಸಿದರು.

ಕುಡಿಯುವ ನೀರು ಸೇರಿದಂತೆ ಜಿಲ್ಲೆಯನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ನೇರವಾಗಿ ಮುಖ್ಯಮಂತ್ರಿಗಳ ಗಮನ ಸೆಳೆಯುವದು ಸೂಕ್ತವೆಂದು ಅವರು ಸಲಹೆ ನೀಡಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ಅಧ್ಯಕ್ಷೆ ಶೋಭಾ ಮೋಹನ್ ಈಗಾಗಲೇ ಉಸ್ತುವಾರಿ ಸಚಿವರ ಗಮನ ಸೆಳೆಯಲಾಗಿದೆ, ಆದರೆ ಯಾವದೇ ಸ್ಪಂದನ ದೊರಕಿಲ್ಲವೆಂದು ಅಸಮಾಧಾನ

ವ್ಯಕ್ತಪಡಿಸಿದರು. ಮತ್ತೊಮ್ಮೆ ಮನವಿ ನೀಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವದು ಎಂದರು.

ಗ್ರಾ.ಪಂ ಪಿಡಿಒಗಳು ಅಂಗನವಾಡಿ, ಸರ್ಕಾರಿ ಶಾಲೆ ಮತ್ತು ವಿವಿಧ ಕಾಮಗಾರಿಗಳ ಬಗ್ಗೆ ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿದ ಅವರು ಸ್ಥಳ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.

ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಲಕ್ಷ್ಮೀ ಮಾತನಾಡಿ ಸರ್ಕಾರದ ನಿಯಮದಂತೆ ಈಗಾಗಲೇ ಪಿಡಿಓ ಅವರನ್ನು ಅಂಗನÀವಾಡಿ ಸೇರಿದಂತೆ ಸರ್ಕಾರಿ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸುವಂತೆ ತಿಳಿಸಲಾಗಿದ್ದು, ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ ಎಂದರು. ಸದಸ್ಯ ಅಪ್ರುರವೀಂದ್ರ ಮಾತನಾಡಿ ಅರೆಕಾಡಿನ ಕಟರಿಕಟ್ಟೆಯಲ್ಲಿ ತೆಗೆಯಲಾಗಿರುವ ಬಾವಿಗೆ ಪಂಪ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸದೆ ಇರುವದರಿಂದ ಸಾರ್ವಜನಿಕರು ಮಳೆ ನೀರನ್ನೇ ಕುಡಿಯುವ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸದಸ್ಯ ಶ್ರೀಧರ್ ಮಾತನಾಡಿ, ಪ್ರಕೃತಿ ವಿಕೋಪದ ಸಂದರ್ಭ ಹಾನಿಗೀಡಾದ ಮನೆಗಳ ಕುಟುಂಬಸ್ಥರು ಗ್ರಾ.ಪಂಗಳಿಗೆ ತೆರಳಿ ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಸಂತ್ರಸ್ತರÀ ಸಮಸ್ಯೆಗಳನ್ನು ಬಗೆಹರಿಸಲು ತಾ.ಪಂ ವತಿಯಿಂದಲೂ ಸಂಬಂಧಿಸಿದ ಗ್ರಾಮಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ವಿದ್ಯುತ್ ಕಂಬಗಳ ದುರವಸ್ಥೆ

ಬಹುತೇಕ ಸದಸ್ಯರು ಮಾತನಾಡಿ, ಮಳೆಗಾಲ ಶುರುವಾಗುತ್ತಿದ್ದಂತೆ ಜಿಲ್ಲೆಯಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ ಎಂದರು. ಅತಿ ಹೆಚ್ಚು ಮಳೆಯಾಗುವ ಭಾಗಮಂಡಲ, ತಲಕಾವೇರಿಗಳಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಇಲ್ಲದೆ ಕತ್ತಲೆಯ ವಾತಾವರಣವಿದೆ. ಮಳೆ ಜೋರಾಗುವ ಮೊದಲು ಸಮರ್ಪಕವಾಗಿ ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸುವಂತೆÉ ಒತ್ತಾಯಿಸಿದರು.

ವಿದ್ಯುತ್ ಕಂಬಗಳನ್ನು ಚರಂಡಿಗಳ ಮಧ್ಯ ಭಾಗದಲ್ಲಿ ಹಾಕಲಾಗುತ್ತಿದ್ದು, ಮಳೆಗಾಲ ಸಂದರ್ಭ ಕಂಬಗಳು ರಸ್ತೆಗೆ ಉರುಳುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ ಸದಸ್ಯರು ಚರಂಡಿಗಳಿಂದ ಕಂಬಗಳನ್ನು ತೆರವುಗೊಳಿಸಿ ವೈಜ್ಞಾನಿಕ ರೂಪದಲ್ಲಿ ಅಳವಡಿಸುವಂತೆ ತಿಳಿಸಿದರು.

ಸದಸ್ಯ ರಾಯ್ ತಮ್ಮಯ್ಯ ಮಾತನಾಡಿ, ಮರಗಳನ್ನು ಕಡಿಯುವ ಸಂದರ್ಭ ಕೊಂಬೆಗಳನ್ನು ರಸ್ತೆಬದಿಯಲ್ಲೇ ಹಾಕಲಾಗಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ಅಡಚಣೆಯಾಗುತ್ತಿದೆ. ತಕ್ಷಣ ರಸ್ತೆಗಳಿಂದ ಮರ ಮತ್ತು ಮರದ ಕೊಂಬೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು.

ಉಪಾಧ್ಯಕ್ಷ ಸಂತು ಸುಬ್ರಮಣಿ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಕೊಡಪಾಲು ಗಣಪತಿ ಮಾತನಾಡಿ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಮೊದಲ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.