ಮಡಿಕೇರಿ, ಜೂ. 11 : ಜಿಲ್ಲೆಯಲ್ಲಿ ತಾ. 11 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಯಾವದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಕೇಂದ್ರಗಳಾದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.