ನಾಪೆÉÇೀಕ್ಲು, ಜೂ. 11: ಮುಂಗಾರು ಆರಂಭವಾಗುತ್ತಿದ್ದಂತೆ ವಿದ್ಯುತ್ ಸಮಸ್ಯೆ ಕಾಣಿಸಿಕೊಂಡಿದ್ದು ನಾಪೆÇೀಕ್ಲು ವಿಭಾಗದಲ್ಲಿ ಕಳೆದ ಎರಡು ದಿನಗಳಿಂದ ಕತ್ತಲಾವರಿಸಿದೆ. ಈ ಹಿನ್ನೆಲೆಯಲ್ಲಿ ತಾ. 12ರಂದು (ಇಂದು) ನಾಪೆÇೀಕ್ಲು ವಿದ್ಯುತ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವದು ಎಂದು ಪಾಡಿಯಮ್ಮಂಡ ಮನು ಮಹೇಶ್ ತಿಳಿಸಿದ್ದಾರೆ.
ಈ ಬಗ್ಗೆ ಪಟ್ಟಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಪೆÉÇೀಕ್ಲು ವಿಭಾಗದಲ್ಲಿ ವಿದ್ಯುತ್ ಸಮಸ್ಯೆಯಿಂದ ಸಾರ್ವಜನಿಕರು, ವ್ಯಾಪಾರಸ್ತರು, ಹೆಚ್ಚಿನ ಸಮಸ್ಯೆ ಎದುರಿಸುವಂತಾಗಿದೆ. ಜಿಲ್ಲೆಗೆ ಮುಂಗಾರು ಮಳೆ ಪ್ರವೇಶವಾದ ಮೊದಲ ದಿನವೇ ವಿದ್ಯುತ್ ಸಮಸ್ಯೆ ಎದುರಾಗಿದೆ. ಬೇಸಿಗೆ ಕಾಲದಲ್ಲಿ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ ಕಾರಣ ಈಗ ಈ ಪರಿಸ್ಥಿತಿ ಉಂಟಾಗಿದೆ ಎಂದು ಅವರು ದೂರಿದರು ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಕಂಗಾಂಡ ಜಾಲಿ ಪೂವಪ್ಪ, ಬೊಪ್ಪಂಡ ಕವನ್ ಕಾಳಪ್ಪ, ಶಿವಚಾಳಿಯಂಡ ಕಿಶೋರ್, ಕುಂಡ್ಯೋಳಂಡ ಗಿರಿ ಪೆಮ್ಮಯ್ಯ. ಇದ್ದರು.