ಮಡಿಕೇರಿ, ಜೂ. 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಅರಣ್ಯ ಇಲಾಖೆ, ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ತಾ. 11 ರಂದು ನಡೆಯಬೇಕಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯ ಕ್ರಮವನ್ನು ಕಾರಣಾಂತರಗಳಿಂದ ತಾ. 18 ಕ್ಕೆ ಮುಂದೂಡಲಾಗಿದೆ ಎಂದು ಪರಿಸರ ಅಧಿಕಾರಿ ಜಿ.ಆರ್. ಗಣೇಶನ್ ಅವರು ತಿಳಿಸಿದ್ದಾರೆ.