ಮಡಿಕೇರಿ, ಜೂ. 12: ತೂಕ್‍ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ವತಿಯಿಂದ ಜಿಲ್ಲೆಯ ಭಾವೀ ಪ್ರಜೆಗಳಿಗೆ ಸೈನಿಕ ಜಾಗೃತಿ ಕಾರ್ಯಕ್ರಮ ತಾ. 17 ರಂದು ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ಸೇನಾ ಸ್ಫೂರ್ತಿಯ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ನಿವೃತ್ತ ಸೇನಾಧಿಕಾರಿಗಳಾದ ಏರ್ ಮಾರ್ಷಲ್ ಕೆ.ಸಿ. ನಂದಾ ಕಾರ್ಯಪ್ಪ, ಮೇಜರ್ ಜನರಲ್ ಬಿ.ಎ. ಕಾರ್ಯಪ್ಪ, ಮೇಜರ್ ಜನರಲ್ ಕೆ.ಪಿ. ನಂಜಪ್ಪ, ಬ್ರಿಗೇಡಿಯರ್ ಚೇನಂಡ ಚಿಯ್ಯಂಡ, ಪುಲಿಯಂಡ ಪೊನ್ನಪ್ಪ, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಜಿಲ್ಲಾಧಿಕಾರಿ ಅನೀಸ್ ಕಣ್ಮಿಣಿ ಜಾಯ್, ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.