ಕೂಡಿಗೆ, ಜೂ. 13: ಕೂಡಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ಪ್ರೇಮಾಲೀಲಾ ಅವರು, ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಸ್ವಚ್ಛತೆಯ ಬಗ್ಗೆ ಜಾಗೃತಿ ಹೊಂದಿರಬೇಕು. ವಿದ್ಯಾರ್ಥಿಗಳು ತನ್ನ ಶಿಕ್ಷಣದ ಜೊತೆಗೆ ಬದುಕಿನಲ್ಲಿ ಸ್ವಚ್ಛತೆಯನ್ನು ಅಳವಡಿಸಿಕೊಂಡಾಗ ಭವಿಷ್ಯದಲ್ಲಿ ಸ್ವಚ್ಛತಾ ಮನೋಭಾವದಿಂದ ಬದುಕಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭ ಕೂಡುಮಂಗಳೂರು ರಾಮೇಶ್ವರ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್‍ಕುಮಾರ್, ಕೂಡಿಗೆ ಗ್ರಾ.ಪಂ ಸದಸ್ಯ ರಾಮಚಂದ್ರ, ಕೂಡಿಗೆ ಪದವಿ ಪೂರ್ವ ಕಾಲೇಜಿನ ಉಪಾಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಶ್ವಿನಿ, ಕಾರ್ಯದರ್ಶಿ ಶಿಲ್ಪ, ಬಿಲ್ ಕಲೆಕ್ಟರ್ ರವಿ, ಶಾಲಾ ಮುಖ್ಯೋಪಾಧ್ಯಾಯಿನಿ ವಾಣಿ ಹಾಗೂ ಶಿಕ್ಷಕ ವೃಂದದವರು ಇದ್ದರು.