ಮಡಿಕೇರಿ, ಜೂ. 13: ಕೊಡಗು ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಬಿ.ಆರ್. ಜೋಯಪ್ಪ ಬರೆದ ‘ಕಾಟಿಬೆಟ್ಟದ ಕತೆಗಳು’ ಪುಸ್ತಕ ಲೋಕಾರ್ಪಣೆ ಸಮಾರಂಭ ತಾ. 15 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.