ಶಸನಿವಾರಸಂತೆ, ಜೂ. 14: ಸಮೀಪದ ಕೊಡ್ಲಿಪೇಟೆ ಹೋಬಳಿಯ ಬ್ಯಾಡಗೊಟ್ಟ ಗ್ರಾಮದ ರಸ್ತೆ ಬದಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ಟಿಪ್ಪರ್‍ಗೆ ಲೋಡ್ ಮಾಡುತ್ತಿದ್ದ ಸಂದರ್ಭ ಧಾಳಿ ನಡೆಸಿದ ಪೊಲೀಸರು ವಾಹನ ಸಹಿತ ಮರಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಬಳೂರು ಗ್ರಾಮದ ಬಿ.ಎಂ. ಸಂದೀಪ್ ಬಂಧಿತನಾಗಿದ್ದು, ಈತ ಅಕ್ರಮವಾಗಿ ಮರಳನ್ನು ಟಿಪ್ಪರ್‍ಗೆ ಲೋಡ್ ಮಾಡುತ್ತಿದ್ದ ಖಚಿತ ಮಾಹಿತಿ ದೊರೆತ ಮೇರೆಗೆ ಪಿಎಸ್‍ಐ ಎಚ್.ಎಂ. ಮರಿಸ್ವಾಮಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಪೊಲೀಸರನ್ನು ಕಂಡಾಕ್ಷಣ ಟಿಪ್ಪರ್‍ಗೆ ಮರಳನ್ನು ಲೋಡ್ ಮಾಡುತ್ತಿದ್ದ ಕೂಲಿ ಕಾರ್ಮಿಕರು ತೋಟದೊಳಗೆ ಓಡಿ ಹೋಗಿದ್ದು, ಸಂದೀಪ್‍ನನ್ನು ಬಂಧಿಸಲಾಗಿದೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪಿಎಸ್‍ಐ ಎಚ್.ಎಂ. ಮರಿಸ್ವಾಮಿ ಪ್ರಕರಣ ದಾಕಲಿಸಿಕೊಂಡಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಕಾರ್ಯಾಚರಣೆ ಯಲ್ಲಿ ಪಿ.ಎಸ್.ಐ.ಗಳಾದ ಚೆಲುವರಾಜ್, ಶಿವಲಿಂಗಯ್ಯ, ಗೋವಿಂದ್ ರಾಜ್, ಸಿಬ್ಬಂದಿಗಳಾದ ಪ್ರದೀಪ್ ಕುಮಾರ್, ರಘು ಹಾಗೂ ಶಫೀರ್ ಪಾಲ್ಗೊಂಡಿದ್ದರು.