ಮಡಿಕೇರಿ, ಜೂ. 14: ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶದಲ್ಲಿ ಏರ್ಪಡಿಸಲು ಪ್ರಸಕ್ತ ಸಾಲಿಗೆ ಬೀದಿನಾಟಕ ಮಹಿಳಾ ಕಲಾ ತಂಡದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ತಾ. 18 ರೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಸ್ಟಿವರ್ಟ್ ಹಿಲ್ ರಸ್ತೆ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.