ಮಡಿಕೇರಿ, ಜೂ.14: ವಸತಿ ಸಚಿವ ಎನ್.ನಾಗರಾಜ ಎಂ.ಟಿ.ಬಿ ಅವರು ತಾ. 16 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಜಂಬೂರು, ಮಧ್ಯಾಹ್ನ 12.15 ಗಂಟೆಗೆ ಕರ್ಣಂಗೇರಿ ಹಾಗೂ ಮಧ್ಯಾಹ್ನ 1 ಗಂಟೆಗೆ ಮಡಿಕೇರಿ ತಾಲೂಕಿನ ಮದೆ ಈ ಗ್ರಾಮಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ನಿರಾಶ್ರಿತರಿಗೆ ನಿರ್ಮಿಸಲಾಗುತ್ತಿರುವ ವಸತಿ ಕಾಮಗಾರಿಗಳ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಂ.ಕೆ.ಜಗದೀಶ್ ತಿಳಿಸಿದ್ದಾರೆ.