ಮಡಿಕೇರಿ, ಜೂ. 14: ಪ್ರಸಕ್ತ ಸಾಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಾ. 18 ರಂದು ಬಸ್ ಪಾಸ್ ಪಡೆದುಕೊಳ್ಳಲು ಅರ್ಜಿಯನ್ನು ಮಡಿಕೇರಿ, ವೀರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾ ಕೇಂದ್ರದಲ್ಲಿ ವಿತರಿಸಲಾಗುತ್ತದೆ.
ವಿದ್ಯಾರ್ಥಿಗಳು ಶಾಲಾ-ಕಾಲೇಜು ಮುಖ್ಯಸ್ಥರ ಮುಖಾಂತರ ಅರ್ಜಿಯನ್ನು ಪಡೆದುಕೊಂಡು ಬಸ್ ಪಾಸನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಬಸ್ ನಿಲ್ದಾಣದ ಮಾಹಿತಿ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಮಡಿಕೇರಿ ಘಟಕದ ಘಟಕ ವ್ಯವಸ್ಥಾಪಕಿ ಗೀತಾ ತಿಳಿಸಿದ್ದಾರೆ.