ಮಡಿಕೇರಿ, ಜೂ. 14: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳು ಸರ್ಕಾರೇತರ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ತಾ. 17 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.