ಮಡಿಕೇರಿ, ಜೂ. 14: ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ವತಿಯಿಂದ ತಾ. 17 ರಂದು ಬೆಳಿಗ್ಗೆ 10 ಗಂಟೆಗೆ ಬೆಣ್ಣೆ ಹಣ್ಣು ಮತ್ತು ಮಾಡಹಾಗಲದ ವೈವಿಧ್ಯತಾ ಮೇಳವು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ನಡೆಯಲಿದೆ.

ಶಾಸಕ ಅಪ್ಪಚ್ಚು ರಂಜನ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿ.ಪಂ. ಸಿಇಓ ಕೆ. ಲಕ್ಷ್ಮೀಪ್ರಿಯಾ, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಎಂ.ಆರ್. ದಿನೇಶ್, ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ತೋಟಗಾರಿಕಾ ಉಪ ಮಹಾ ನಿರ್ದೇಶಕ ಡಾ. ಎ.ಕೆ. ಸಿಂಗ್ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಬೆಣ್ಣೆ ಹಣ್ಣು ಮತ್ತು ಮಾಡಹಾಗಲದ ವಿಚಾರ ಸಂಕಿರಣ ಮತ್ತು ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಆಸಕ್ತ ರೈತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಚೆಟ್ಟಳ್ಳಿ ಕೇಂದ್ರ ರೈತರಲ್ಲಿ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿ 08276-266635 ನ್ನು ಸಂಪರ್ಕಿಸಬಹುದು.