ಸೋಮವಾರಪೇಟೆ, ಜೂ. 14: ಮೀನು ಮರಿಗಳ ಉತ್ಪಾದನೆ ಮತ್ತು ಪಾಲನೆಯ ಅವಧಿ ಪ್ರಾರಂಭವಾಗಿರುವ ಹಿನ್ನೆಲೆ ಆಸಕ್ತ ರೈತರು ಮೀನು ಮರಿಗಳಿಗೆ ಬೇಡಿಕೆ ಸಲ್ಲಿಸಬಹುದಾಗಿದೆ ಎಂದು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಭರತ್ ತಿಳಿಸಿದ್ದಾರೆ.
ಆಸಕ್ತರು ಕಚೇರಿ ವೇಳೆಯಲ್ಲಿ ಬೇಡಿಕೆ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ: 08276-295051 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.