ಮಡಿಕೇರಿ, ಜೂ. 14: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದ ಮಡಿಕೇರಿ, ಬೆಂಗಳೂರು, ಮೈಸೂರು, ಮೂಡಬಿದರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಈ ಸ್ಥಳಗಳಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸಲಾಗುತ್ತಿದೆ. ಈ ತರಬೇತಿ ಸಂಸ್ಥೆಗಳ ಮೂಲಕ ಸಹಕಾರ ಸಂಘ-ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮಾತ್ರ “6 ತಿಂಗಳು/ 180 ದಿನಗಳ” ಅವಧಿಯ ದೂರ ಶಿಕ್ಷಣದ ಮೂಲಕ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಯನ್ನು ಜುಲೈ ಮಾಹೆಯಿಂದ ಪ್ರಾರಂಭಿಸಲಾಗುತ್ತಿದ್ದು, ಈ ತರಬೇತಿ ಪಡೆಯಲಿಚ್ಚಿಸುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 08272-228437, 9902189872, 9535250704 9449245024 ರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲ ಪುಟ್ಟಸ್ವಾಮಿ ತಿಳಿಸಿದ್ದಾರೆ.