ಕೂಡಿಗೆ, ಜೂ. 14: ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೂಡುಮಂಗಳೂರು ಗ್ರಾ.ಪಂ. ವತಿಯಿಂದ ಸ್ವಚ್ಛಮೇವ ಜಯತೆ ಹಾಗೂ ಜಲಾಮೃತ ಕಾರ್ಯಕ್ರಮ ನಡೆಯಿತು.

ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ರವಿ ನೆರವೇರಿಸಿದರು. ಗ್ರಾ.ಪಂ. ಸದಸ್ಯ ಮಂಜುನಾಥ್, ಈರಪ್ಪ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಯಿಷಾ, ಕಾರ್ಯದರ್ಶಿ ಮಾದಪ್ಪ, ಬಿಲ್‍ಕಲೆಕ್ಟರ್ ಅವಿನಾಶ್, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.