ಕೂಡಿಗೆ, ಜೂ. 14: ಕುಶಾಲನಗರ ರೈತ ಸಂಪರ್ಕ ಕೇಂದ್ರದಲ್ಲಿ ಕುಶಾಲನಗರ ಹೋಬಳಿ ವ್ಯಾಪ್ತಿಯ ರೈತರಿಗೆ ಅನುಕೂಲವಾಗುವಂತೆ ಇಲಾಖೆ ಕೃಷಿ ಉಪಕರಣಗಳನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ವಿತರಿಸಿದರು.

ನಂತರ ಮಾತನಾಡಿದ ಅವರು, ಈಗಾಗಲೇ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಅನುಕೂಲವಾಗುವ ಟಾರ್ಪಲ್, ಸ್ಪ್ರೇಯರ್ ಮಿಷನ್ ಮತ್ತು ಪೈಪ್‍ಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ರೈತರು ತಮ್ಮ ಜಮೀನಿನ ದಾಖಲಾತಿಗಳನ್ನು ಸಮರ್ಪಕವಾಗಿ ಒದಗಿಸಿ, ಕೃಷಿ ಉಪಕರಣಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಪೂಣಚ್ಚ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಜಯಮ್ಮ, ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮಾಜಿ ಅಧ್ಯಕ್ಷ ಚಂದ್ರಪ್ಪ, ರೈತ ಸಂಪರ್ಕ ಕೇಂದ್ರದ ಸುನಿಲ್ ಸೇರಿದಂತೆ ರೈತರು ಇದ್ದರು.