ಮಡಿಕೇರಿ, ಜೂ. 14: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಲ್ಲಿ ಶಿಶಿಕ್ಷು ಜಾಹೀರಾತು ಅಧಿನಿಯಮದ ಅನ್ವಯ ವಿವಿಧ ತಾಂತ್ರಿಕ, ಪಾಸಾ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಕರ್ನಾಟಕ ರಾಜ್ಯa ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಐ.ಟಿ.ಐ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ; ಪಾಸಾ 16 ಸ್ಥಾನ, ಇಲೆಕ್ಟ್ರೀಷಿಯನ್ 18, ಫಿಟ್ಟರ್ 5, ಮೆಕ್ಯಾನಿಕ್ ಡೀಸೆಲ್ 87, ಎಂ.ವಿ.ಬಿ.ಬಿ. 5, ವೆಲ್ಡರ್ 10, ಸಿ.ಒ.ಇ ಟ್ರೇಡ್ ಗ್ರೂಫ್ 10, ಸಿ.ಒ.ಇ ಟ್ರೇಡ್ ಗ್ರೂಫ್ 20, ಒಟ್ಟು 171 ಸ್ಥಾನಗಳಿವೆ.

ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ನಿಯೋಜನೆಗೆ ಬಾಕಿ ಇರುವ ಖಾಲಿ ಸ್ಥಾನಗಳ ವಿವರ: ಇಲೆಕ್ಟ್ರೀಷಿಯನ್ 5, ಫಿಟ್ಟರ್ 1, ಎಂ.ವಿ.ಬಿ.ಬಿ. 2, ವೆಲ್ಡರ್ 3 ಒಟ್ಟು 11 ಸ್ಥಾನಗಳು.

ಹೆಚ್ಚಿನ ಮಾಹಿತಿಗೆ ಆಯೋಗದ ಅಂತರ್ಜಾಲ ತಿತಿತಿ. ಚಿಠಿಠಿಡಿeಟಿಣiಛಿeshiಠಿ.gov.iಟಿ ನಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡುವದು ಹಾಗೂ ನೋಂದಣಿ ಪ್ರತಿಯನ್ನು ಸಲ್ಲಿಸುವದು. (ನೋಂದಣಿ ಪ್ರತಿ ಸಲ್ಲಿಸದೇ ಇರುವ ಅರ್ಜಿಯನ್ನು ತಿರಸ್ಕರಿಸಲಾಗುವದು). ಅರ್ಜಿ ಸಲ್ಲಿಸಲು ತಾ. 25 ಕೊನೆಯ ದಿನವಾಗಿದೆ. ಮೀಸಲಾತಿ ಪರಿಶಿಷ್ಟ ಜಾತಿ 1:8, ಪರಿಶಿಷ್ಟ ಪಂಗಡ 1:20, ಅಂಗವಿಕಲ ಪ್ರತಿ ಶತ 3 ಮತ್ತು ಮಾಜಿ ಸೈನಿಕ ಮಕ್ಕಳಿಗೆ ಪ್ರತಿಶತ 3 ನೀಡಲಾಗುವದು. 2019ರ ಜೂನ್, 15 ಕ್ಕೆ 18 ವರ್ಷ ತುಂಬಿರಬೇಕು. ಹಾಗೂ 26 ವರ್ಷಗಳಿಗಿಂತ ಕಡಿಮೆ ಇರಬೇಕು. ಈಗಾಗಲೇ ಶಿಶಿಕ್ಷು ತರಬೇತಿ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ ಎಂದು ಪುತ್ತೂರು ವಿಭಾಗದ ಕ.ರಾ.ರ.ಸಾ. ನಿಗಮದ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸಾಲ-ಸಹಾಯಧನ ಸೌಲಭ್ಯ ಪಡೆಯಲು ಬಯಸುವವರಿಂದ

ಪ್ರಸಕ್ತ ಸಾಲಿನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಸುತ್ತಿರುವ ವಿವಿಧ ಸಾಲ ಯೋಜನೆಗಳಿಗೆ ಬೆಸ್ತ, ಕೋಳಿ, ಕಬ್ಬಲಿಗೆ, ಮೋಗವೀರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು: ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಗಂಗಾ-ಕಲ್ಯಾಣ, ನೀರಾವರಿ ಯೋಜನೆ.

ನಿಗದಿತ ಅರ್ಜಿ ನಮೂನೆಗಳನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿದೆ. ಒಂದು ಬಾರಿ ನಿಗಮದ ಯಾವದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರ ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವದು.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್:hಣಣಠಿ://10.10.29.73.81/ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ/ಠಿubಟiಛಿ/ ದೂರವಾಣಿ ಸಂಖ್ಯೆ 08272-221656 ನ್ನು ಸಂಪರ್ಕಿಸಬಹುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿಶೇಷಚೇತನರಿಂದ

ವಿಶೇಷಚೇತನರ ಎನ್‍ಪಿಆರ್‍ಪಿಡಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಡಿಕೇರಿ ತಾಲೂಕಿನಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಒಂದು ಹುದ್ದೆ ಹಾಗೂ ನಗರಸಭೆ ಮತ್ತು 3 ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಶೇಷಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶೇಷಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ (ಎನ್‍ಪಿಆರ್‍ಪಿಡಿ) ಮಡಿಕೇರಿ ತಾಲೂಕಿನಾದ್ಯಂತ ಕೆಲಸ ನಿರ್ವಹಿಸಲು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಒಂದು ಹುದ್ದೆ ಖಾಲಿ ಇದ್ದು ಈ ಹುದ್ದೆಗೆ ಮಾಸಿಕ ಗೌರವಧನ ರೂ. 6 ಸಾವಿರ ನೀಡಲಾಗುವದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಯು ವಿಶೇಷಚೇತನರಾಗಿದ್ದು, ವಿಶೇಷಚೇತನತೆಯ ಸ್ವರೂಪ ಶೇ. 40 ಕ್ಕಿಂತ ಮೇಲ್ಪಟ್ಟು ಶೇ. 75 ಕ್ಕಿಂತ ಕಡಿಮೆಯಿರಬೇಕು. 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು.

ನಗರಸಭೆ ಮಡಿಕೇರಿಯಲ್ಲಿ ಹಾಗೂ 3 ಪಟ್ಟಣ ಪಂಚಾಯಿತಿಗಳಾದ ಸೋಮವಾರಪೇಟೆ, ಕುಶಾಲನಗರ ಮತ್ತು ವೀರಾಜಪೇಟೆಗಳಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯನ್ನು ಭರ್ತಿ ಮಾಡಲು ವಿಶೇಷಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯ ಒದಗಿಸಲು

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2019-20ನೇ ಸಾಲಿಗೆ ಪರಿಶಿಷ್ಟ ಪಂಗಡ ಜನರಿಗೆ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋಕ್ರೆಡಿಟ್ ಯೋಜನೆ ಹಾಗೂ ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮಡಿಕೇರಿ ಇವರನ್ನು ಹಾಗೂ ದೂರವಾಣಿ ಸಂಖ್ಯೆ 08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಸಹಾಯ ಧನಕ್ಕೆ

ಪ್ರಸಕ್ತ (2019-20) ಸಾಲಿನಲ್ಲಿ ಅನುಷ್ಠಾನಗೊಸುತ್ತಿರುವ ಯೋಜನೆಗಳಲ್ಲಿ ಬೆಸ್ತ, ಕೊಲಿ, ಕಬ್ಬಲಿಗೆ, ಮೊಗವೀರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯ ಧನ ಸೌಲಭ್ಯ ಪಡೆಯಲು ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಗಂಗಾ-ಕಲ್ಯಾಣ ನೀರಾವರಿ ಯೋಜನೆ.

ನಿಗದಿತ ಅರ್ಜಿ ನಮೂನೆಗಳನ್ನು ಡಿ.ದೇವರಾಜ ಅರಸು, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿದೆ. ಒಂದು ಬಾರಿ ನಿಗಮದ ಯಾವದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರ ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವದು.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್:hಣಣಠಿ://10.10.29.73.81/uಠಿಠಿಚಿಡಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿ/ಠಿubಟiಛಿ/ ಹಾಗೂ ದೂರವಾಣಿ ಸಂಖ್ಯೆ 08272-221656 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.