ಸೋಮವಾರಪೇಟೆ, ಜೂ. 14: ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ನರ್ಸರಿ ತರಗತಿಗೆ ಚಾಲನೆ ನೀಡಲಾಯಿತು.

ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ. ಚಂಗಪ್ಪ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದರು. ತಾಕೇರಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಇಂಗ್ಲೀಷ್ ಮಾಧ್ಯಮ ಪ್ರಯತ್ನ ನಡೆದಿದೆ ಎಂದರು.

ತಾ.ಪಂ. ಸದಸ್ಯ ಬಿ.ಬಿ. ಸತೀಶ್, ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಸನ್ನ ಕುಮಾರ್, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ಇ. ಭರತ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಧರ್ಮಪ್ಪ, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶೈಲಾ, ಮುಖ್ಯ ಶಿಕ್ಷಕ ಮಂಜುನಾಥ್ ಇದ್ದರು.