ಸೋಮವಾರಪೇಟೆ, ಜೂ. 16: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕಕ್ಕೆ ವಿವಿಧ ಇಲಾಖೆಗಳ ಪ್ರತಿನಿಧಿಗಳಾಗಿ 23 ನಿರ್ದೇಶಕರುಗಳು ಆಯ್ಕೆಯಾಗಿದ್ದಾರೆ.
ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ 15 ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 8 ಸ್ಥಾನಗಳಿಗೆ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಪ್ರತಿನಿಧಿಗಳ ಆಯ್ಕೆಗಾಗಿ ಚುನಾವಣೆ ನಡೆಯಿತು.
ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಶಾಲಾ ವಿಭಾಗಕ್ಕೆ ಶಿಕ್ಷಕರುಗಳಾದ ಎನ್.ಎಂ.ನಾಗೇಶ್, ಎಂ.ಪಿ.ವಸಂತ, ಸಿ.ಕೆ.ಶಿವಕುಮಾರ್, ಎಸ್.ಎಂ.ಸುರೇಶ್ ಅವರುಗಳು ಆಯ್ಕೆಯಾಗಿದ್ದಾರೆ. ಆರೋಗ್ಯ ಇಲಾಖೆಯಿಂದ ಬಸವರಾಜು, ಬಿ.ಎಂ.ಅನಿತಾ, ವನಿತಾ ಮತ್ತು ಲೋಹಿತ್ ನೇಮಕಗೊಂಡಿದ್ದು, ಚುನಾವಣಾಧಿಕಾರಿಗಳಾಗಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ರಮಾವತಿ ಕಾರ್ಯನಿರ್ವಹಿಸಿದರು.