ಮಡಿಕೇರಿ, ಜೂ.16: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ 2019-20 ನೇ ಸಾಲಿನ ಅಧ್ಯಕ್ಷರಾಗಿ ಎಂ.ಆರ್.ಜಗದೀಶ್ ಮತ್ತು ಕಾರ್ಯದರ್ಶಿಯಾಗಿ ಪ್ರಮೋದ್ ರೈ ನೇಮಕಗೊಂಡಿದ್ದಾರೆ. ನೂತನ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮ ತಾ. 23 ರಂದು ಆಯೋಜಿತವಾಗಿದೆ.
ರೋಟರಿ ಮಿಸ್ಟಿ ಹಿಲ್ಸ್‍ನ 15 ನೇ ಅಧ್ಯಕ್ಷರಾಗಿ ಎಂ.ಆರ್.ಜಗದೀಶ್ ಮತ್ತು ಕಾರ್ಯದರ್ಶಿಯಾಗಿ ಪ್ರಮೋದ್ ರೈ ಕ್ರಿಸ್ಟಲ್ ಕೋರ್ಟ್‍ನಲ್ಲಿ ಆಯೋಜಿತ ಪದಗ್ರಹಣ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಮಾಜಿ ಅಸಿಸ್ಟೆಂಟ್ ಗವರ್ನರ್ ಬಿ.ಕೆ.ರವೀಂದ್ರ ರೈ ಪದಗ್ರಹಣ ನೆರವೇರಿಸಲಿದ್ದು, ಅರಮೇರಿ ಕಳಂಚೇರಿ ಮಠಾಧೀಶ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.