ಕುಶಾಲನಗರ, ಜೂ. 16: ಅರಣ್ಯ ಇಲಾಖೆ ಕುಶಾಲನಗರ ವಲಯ ಮತ್ತು ಸೋಮವಾರಪೇಟೆ ವಿಭಾಗ ಲೋಕೋಪಯೋಗಿ ಇಲಾಖೆ ಜಂಟಿ ಆಶ್ರಯದಲ್ಲಿ ಸ್ಥಳೀಯ ಪ್ರವಾಸಿ ಮಂದಿರದ ಆವರಣದಲ್ಲಿ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸೋಮವಾರಪೇಟೆ ವಿಭಾಗ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಲಯ ಅರಣ್ಯಾಧಿಕಾರಿ ಸಿ.ಆರ್. ಅರುಣ್ ಮಾತನಾಡಿ, ಗಿಡಗಳನ್ನು ನೆಟ್ಟು ಬೆಳೆಸಬೇಕೆನ್ನುವ ಮನಸ್ಥಿತಿ ಪ್ರತಿಯೊಬ್ಬರಿಗೂ ಮೂಡಬೇಕಿದೆ. ಹಸಿರು ಕರ್ನಾಟಕ ಯೋಜನೆಯಡಿ ಸಸಿಗಳನ್ನು ಅಗತ್ಯವಿರುವವರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು. ಅರಣ್ಯ ಇಲಾಖೆ ವತಿಯಿಂದ ಕೈಗೊಂಡಿರುವ ಹಸಿರೀಕರಣ ಯೋಜನೆ ಮೂಲಕ ಸಾರ್ವಜನಿಕರು ಜಿಲ್ಲೆ ಹಾಗೂ ರಾಜ್ಯದ ಹಸೀರೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು.
ಈ ಸಂದರ್ಭ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ್ ಕುಮಾರ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕರಾದ ಎಂ.ಎನ್. ಚಂದ್ರಮೋಹನ್, ಪ್ರಮುಖರಾದ ಡಿ.ಆರ್. ಸೋಮಶೇಖರ್, ವಿ.ಡಿ. ಪುಂಡರೀಕಾಕ್ಷ, ಸಣ್ಣೇಗೌಡ, ಲೋಕೋಪಯೋಗಿ ಇಲಾಖೆ ಅಭಿಯಂತರರಾದ ಸೈಜನ್ ಪೀಟರ್, ಧರ್ಮಲಿಂಗಂ ಮತ್ತು ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ ಸಿಬ್ಬಂದಿಗಳು ಇದ್ದರು.