ಮಡಿಕೇರಿ, ಜೂ. 16: ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ತಾ. 18 ರಂದು ಬೆಳಗ್ಗೆ 10 ಗಂಟೆಯಿಂದ 11:30 ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಹಾಗೂ ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಮಧ್ಯಾಹ್ನ 12:30 ಗಂಟೆಯಿಂದ 2 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಸಾರ್ವಜನಿಕರು, ವಿದ್ಯುತ್ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಮಡಿಕೇರಿ ವಿಭಾಗದ ಸೆಸ್ಕ್‍ನ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.