ಮಡಿಕೇರಿ, ಜೂ. 16: ಕರ್ನಾಟಕ ರಾಜ್ಯ ನೈರ್ಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ತಾ. 20 ರಿಂದ ಜಿಲ್ಲೆಯಲ್ಲಿ ಸಾಧಾರಣ ಮುಂಗಾರು ಮಳೆ ಅರಂಭವಾಗಲಿದ್ದು, ಈ ಸಂಬಂಧ ಅಧಿಕಾರಿಗಳು ಮುಂದಿನ 2-3 ದಿನಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಂಡು ತಾ. 19 ರಿಂದ ಸಕಲ ಸನ್ನದ್ಧರಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಜನರನ್ನು ಮಳೆಗಾಲ ಮುಗಿಯುವವರೆಗೆ ಮುಂಜಾಗ್ರತೆ ದೃಷ್ಟಿಯಿಂದ ಪುನರ್ ವಸತಿ ಕೆಂದ್ರಗಳಿಗೆ ಸ್ಥಳಾತರಿಸಲು ಅಗತ್ಯ ಕ್ರಮಕೈಗೊಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೊಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪುನರ್ ವಸತಿ ಸಂಬಂಧ ಪ್ರಥಮ ಹಾಗೂ ದ್ವಿತೀಯ ಪಟ್ಟಿಯಲ್ಲಿರುವ ಅರ್ಹ ಪಲಾನುಭವಿಗಳಿಗೆ ಮುಂದಿನ ಮೂರು ತಿಂಗಳಿಗೆ ಅವಶ್ಯವಿರುವ ಮನೆ ಬಾಡಿಗೆ ಹಣವನ್ನು ಎರಡು ದಿನಗಳಲ್ಲಿ ಪಾವತಿಸಲು ಕ್ರಮಕೈಗೊಂಡು ವರದಿ ನಿಡುವಂತೆ ಉಪವಿಭಾಗಧಿಕಾರಿ ಹಾಗೂ ಪುನರ್ವಸತಿ ವಿಶೇಷ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರಿಗೆ ಸೂಚನೆ ನೀಡಿದರು.ಈಗಾಗಲೇ ಗುರುತಿಸಿರುವ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶದಲ್ಲಿನ ಜನರಿಗೆ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತದ ವತಿಯಿಂದ ತೆರೆಯಲಾಗುವ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವದು ಹಾಗೂ ಈ ಪ್ರದೇಶಗಳಲ್ಲಿವಾಸಿಸುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವದೇ ತೊಂದರೆಯಾಗದಂತೆ ವಿದ್ಯಾರ್ಥಿನಿಲಯಗಳಲ್ಲಿ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು. ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಸೂಕ್ಷ್ಮ ಪ್ರದೇಶಗಳಲ್ಲಿನ ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ
(ಮೊದಲ ಪುಟದಿಂದ) ರೋಗಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ನೊಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಕೃತಿ ವಿಕೋಪದಿಂದ ಸಂಭವಿಸಬಹುದಾದ ಅನಾಹುv Àಗಳನ್ನು ಸಮರ್ಥವಾಗಿ ನಿರ್ವಹಿಸಲು ನೂಡಲ್ ಅಧಿಕಾರಿಗಳು ತೆಗೆದುಕೊಳ್ಳುವ ನಿರ್ಧಾರವು ಸಾರ್ವಜನಿಕರಿಗೆ ಅನುಕೂಲಕರವಾಗಿರಬೇಕು. ಯಾವದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ಬರೆ ಕುಸಿತ ಸಂಭವಿಸಬಹು ದಾದ ಪ್ರದೇಶಗಳಲ್ಲಿ ಭೂ ಕುಸಿತ ಉಂಟಾದಾಗ ತೆರವು ಕಾರ್ಯಾಚರಣೆ ನಡೆಸಲು ಅವಶ್ಯವಿರುವ ಹಿಟಾಚಿ, ಜೆಸಿಬಿಗಳನ್ನು ಸನ್ನದ್ದವಾಗಿ ಇಟ್ಟುಕೊಂಡು ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ ಮಾತನಾಡಿ ಈಗಾಗಲೇ 42 ಪುನರ್ವಸತಿ ಕೇಂದ್ರಗಳ ನಿರ್ವಹಣೆಗೆ ಬೇಕಾಗಿರುವ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ನೂಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ವಾಹನಗಳನ್ನು ಸನ್ನದ್ಧವಾಗಿರಿಸಿಕೊಳ್ಳಲು ಸೂಚನೆ ನೀಡಿದರು.
ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತುರ್ತು ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಬಿತ್ತಿ ಪತ್ರಗಳನ್ನು ಜಿಲ್ಲಾಧಿಕಾರಿ ಅನ್ನೀಸ್ ಕಣ್ಮಣಿ ಜಾಯ್ ಅನಾವರಣಗೊಳಿಸಿದರು.