ಕುಶಾಲನಗರ, ಜೂ 16: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ವಲಯ ಅರಣ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಭಾರತಿ ಪದವಿಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ತಾ. 17 ರಂದು (ಇಂದು) ಸ್ವಚ್ಛತೆ ಬಗ್ಗೆ ಅರಿವು ಜಾಗೃತಿ ಮೆರವಣಿಗೆ ಹಾಗೂ ಗಿಡ ನಾಟಿ ಕಾರ್ಯಕ್ರಮ ನಡೆಯಲಿದೆ.