ಮಡಿಕೇರಿ, ಜೂ. 18: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ತಾ. 21 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ 10-15 ಖಾಸಗಿ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿ ಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ವಾಹನ ಚಾಲನ ಪರವಾನಗಿ ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳ ದಲ್ಲಿ ಭಾಗವಹಿಸ ಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗು ವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.