*ಗೋಣಿಕೊಪ್ಪಲು, ಜೂ. 18: ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಭೆ ತಾ. 24ರಂದು ಬೆಳಿಗ್ಗೆ 10.30 ಗಂಟೆಗೆ ಪಂಚಾಯಿತಿಯ ಸಮುದಾಯ ಭವನದ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಇ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿಯಾಗಿ ಎನ್.ಬಿ. ಚಂದ್ರಶೇಖರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.