ವೀರಾಜಪೇಟೆ, ಜೂ. 17: ವೀರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಗರ ಪೊಲೀಸ್ ಠಾಣಾ ವತಿಯಿಂದ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು.

ವೃತ್ತ ನಿರೀಕ್ಷಕ ಕ್ಯಾತೇಗೌಡ ಮತ್ತು ಠಾಣಾಧಿಕಾರಿ ಸಂತೋಷ್ ಕಶ್ಯಪ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.

ಪದವಿ ಪೂರ್ವ ವಿದ್ಯಾರ್ಥಿಗಳು ಚಾಲನೆ ಪರವಾನಗಿ ಅರ್ಹತೆ ಹೊಂದಿಲ್ಲವಾದ್ದರಿಂದ ವಾಹನ ಚಾಲನೆ ಮಾಡದಂತೆಯೂ, ತಮ್ಮ ಜೀವನದ ಗುರಿ ಸಾಧಿಸುವ ನಿಟ್ಟಿನಲ್ಲಿ ಸಾಧನೆ ಮಾಡುವಂತೆ ತಿಳಿಸಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಎನ್.ಎಂ. ನಾಣಯ್ಯ ವಹಿಸಿದ್ದರು.