ಮಡಿಕೇರಿ, ಜೂ. 18: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ಅಚ್ಚುಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.

ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢ ಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ.

ಕಾರ್ಯಕ್ರಮವನ್ನು ನಡೆಸುವ ಸಲುವಾಗಿ ಪ್ರಾಧಿಕಾರವು ರೂ. 5 ಸಾವಿರಗಳ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವದು. ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ವಿವರಗಳೊಂದಿಗೆ ಆಯಾಯ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ. ಕಾರ್ಯಕ್ರಮದ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವದು ಕಡ್ಡಾಯ.

ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002, ದೂ. 080-22484516, 22107704 ಇವರಿಗೆ ಸಲ್ಲಿಸುವದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನ್ನು ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಯುವಧಳ ಸೇವಾ ಕಾರ್ಯಕರ್ತರಾಗಿ ಸೇವೆ ಸಲ್ಲಿಸಲು

ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಕೊಡಗು ಜಿಲ್ಲೆ ಮಡಿಕೇರಿ ನೆಹರು ಯುವ ಕೇಂದ್ರವು ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ರಾಷ್ಟ್ರೀಯ ಯುವಧಳ ಸೇವಾ ಕಾರ್ಯಕರ್ತರಾಗಿ ಒಂದು ವರ್ಷದ ಅವಧಿಗೆ ಸೇವೆ ಸಲ್ಲಿಸಲು 2019-20ನೇ ಸಾಲಿಗೆ ಅರ್ಹ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾಲೇಜಿನಲ್ಲಿ ವ್ಯಾಸಂಗ ಮಾಡುವವರು ಅರ್ಜಿ ಸಲ್ಲಿಸುವಂತಿಲ್ಲ. 18 ರಿಂದ 29 ವರ್ಷ ವಯೋಮಾನದೊಳಗಿರುವ ಹತ್ತನೇ ತರಗತಿಯಲ್ಲಿ ಕಡ್ಡಾಯವಾಗಿ ತೇರ್ಗಡೆಯಾಗಿರುವ(ಗರಿಷ್ಠ ಮಿತಿ ಇರುವದಿಲ್ಲ) ಯುವಜನರು ಅರ್ಜಿ ಸಲ್ಲಿಸಬಹುದಾಗಿದೆ.

ಮಾಸಿಕ ಗೌರವಧನವನ್ನು ನೀಡಲಾಗುತ್ತದೆ. ಪದವಿಪೂರ್ವ, ಪದವೀಧರ ಮಹಿಳೆಯರಿಗೆ ಆದ್ಯತೆ ಇದೆ. ಆಯ್ಕೆಯಾದ ಸೇವಾ ಕಾರ್ಯಕರ್ತರು ಯುವ ಹಾಗೂ ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಸ್ವಚ್ಛ ಭಾರತ್ ಮಿಷನ್, ಪ್ರಧಾನ ಮಂತ್ರಿಯ ಜನ್-ಧನ್ ಯೋಜನೆ, ಜಾಗೃತಾಂದೋಲನ, ಇತರ ಕಾರ್ಯಕ್ರಮಗಳನ್ನು ಹಾಗೂ ಆರೋಗ್ಯ, ಸಾಕ್ಷರತೆ, ಗ್ರಾಮ ನೈರ್ಮಲ್ಯ ಮುಂತಾದ ಕಾರ್ಯಕ್ರಮಗಳನ್ನು ಆಯಾಯ ತಾಲ್ಲೂಕುಗಳಲ್ಲಿ ನೆಹರು ಯುವ ಕೇಂದ್ರದ ಮುಖಾಂತರ ಅನುಷ್ಠಾನಗೊಳಿಸಬೇಕು. ನೂತನವಾಗಿ ಸಂಘ ಮಂಡಳಿಗಳನ್ನು ಸಂಸ್ಥಾಪಿಸಬೇಕು.

ಅರ್ಜಿ ಸಲ್ಲಿಸುವವರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಯುವಜನ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ, ಯಶು ನಿಲಯ, ಕಾವೇರಿ ಲೇಔಟ್, ಬ್ಲಾಕ್ ನಂ.8, ಮಡಿಕೇರಿ-571201, ಇಲ್ಲಿ ಪಡೆದು ತಾ. 21 ರೊಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸದ ಅಭ್ಯರ್ಥಿಗಳು, ಸಲ್ಲಿಸದವರು ನೇರವಾಗಿ ತಾ. 24 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಂದರ್ಶನಕ್ಕೆ ಮೂಲ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ. 9901312526, 9008137503, 08272-225470 ನ್ನು ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಜಸಿಂತಾ ಡಿಸೋಜ ತಿಳಿಸಿದ್ದಾರೆ.

ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ

ಪ್ರಸಕ್ತ ಸಾಲಿನಲ್ಲಿ ಪೊಲೀಸ್ ಇಲಾಖೆಯ ಹೈದರಾಬಾದ್-ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ ತಿತಿತಿ.ಞsಠಿ.gov.iಟಿ ಮುಖಾಂತರ ಮಾತ್ರ ತಾ. 29 ರೊಳಗೆ ಹಾಗೂ ಅಧಿಕೃತ ಬ್ಯಾಂಕ್ ಖಾತೆಗಳ, ಅಂಚೆ ಕಚೇರಿಯಲ್ಲಿ ಶುಲ್ಕವನ್ನು ಪಾವತಿಸಲು ಜುಲೈ, 3 ಕೊನೆಯ ದಿನವಾಗಿದೆ. ಕರ್ನಾಟಕ ಅರಣ್ಯ ಪ್ರದೇಶಗಳ್ಲಲಿ ವಾಸಿಸುತ್ತಿರುವ ಬುಡಕಟ್ಟು (ಸಿದ್ಧಿಗರು, ಜೇನುಕುರುಬ, ಕಾಡುಕುರುಬ, ಯರವ, ಸೋಲಿಗ, ಕುಡಿಯ, ಗೌಡ್ಲು, ಹಸಲರು, ಮಲೆಕುಡಿಯ ಮತ್ತು ಕೊರಗ) ಅಭ್ಯರ್ಥಿಗಳಿಗೆ ವಯೋಮಿತಿ 30 ವರ್ಷಗಳು. ಆನ್‍ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ 080-22943346 ನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಜಾನಪದ ಕೃತಿಗಳ ಆಹ್ವಾನ

ಕರ್ನಾಟಕ ಜಾನಪದ ಅಕಾಡೆಮಿಯು 2018ರ ಜನವರಿ, 01 ರಿಂದ 2018ರ ಡಿಸೆಂಬರ್ 31 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಂತೆ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ ಸಂಶೋಧನೆ ಮತ್ತು ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

ಲೇಖಕರು, ಪ್ರಕಾಶಕರು, ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜುಲೈ 15 ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡುವಂತೆ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.