ಸೋಮವಾರಪೇಟೆ, ಜೂ. 17: ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. 18 ರಂದು (ಇಂದು) ಬೆಳಗ್ಗೆ 10 ಗಂಟೆಯಿಂದ 11.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ತಾ. 18 ರಂದು ಮಧ್ಯಾಹ್ನ 12.30 ಗಂಟೆಯಿಂದ 2 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಸಭೆ ನಡೆಯಲಿದೆ.