ಮಡಿಕೇರಿ, ಜೂ. 17: ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. 18 ರಂದು ಬೆಳಗ್ಗೆ 10 ಗಂಟೆಯಿಂದ 11.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಧ್ಯಾಹ್ನ 12.30 ಗಂಟೆಯಿಂದ 2 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.